दक्षिण पश्चिम रेलवे / SOUTH WESTERN RAILWAY प्रेस विज्ञप्ति / Press Release No. 448 Dt: 06.12.2021
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ65ನೇ ಮಹಾಪರಿನಿರ್ವಾಣ ದಿವಸದ ಆಚರಣೆ.
ದಿನಾಂಕ 06.12.2021 ರಂದು ಭಾರತರತ್ನ ಡಾಬಿ.ಆರ್. ಅಂಬೇಡ್ಕರ್ಅವರ ಮಹಾಪರಿನಿರ್ವಾಣ ದಿವಸವನ್ನು ನೈಋತ್ಯ ರೈಲ್ವೆಯಕೇಂದ್ರ ಕಚೇರಿ, ರೈಲ್ ಸೌಧದಲ್ಲಿಹುಬ್ಬಳ್ಳಿಯಲ್ಲಿಆಚರಿಸಲಾಯಿತು.
ಈ ಸಮಾರಂಭದ ಮುಖ್ಯ ಅತಿಥಿಯಾಗಿದ್ದಪ್ರಧಾನ ವ್ಯವಸ್ಥಾಪಕ ಶ್ರೀ ಸಂಜೀವ್ ಕಿಶೋರರವರು ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶ್ರೀ ಸಂಜೀವ್ ಕಿಶೋರರವರು ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವದ ಕುರಿತು ಮಾತನಾಡುತ್ತಾ ಅವರು ಸಮಾಜದ ಹಿಂದುಳಿದ ವರ್ಗಗಳ ಉನ್ನತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.
ಭಾರತರತ್ನ ಡಾಬಿ.ಆರ್.ಅಂಬೇಡ್ಕರ್ ಅವರ ಆದರ್ಶತತ್ವಗಳನ್ನುರಾಷ್ಟ್ರದ ಅಭಿವೃದ್ಧಿಗಾಗಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಸಂಜೀವ್ ಕಿಶೋರ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಂಡರು.
ಈಕಾರ್ಯಕ್ರಮದಲ್ಲಿಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರಶಾಂತ್ ಕುಮಾರ್ ಮಿಶ್ರಾ, ಕೇಂದ್ರ ಕಚೇರಿಯ ಎಲ್ಲಾ ಇಲಾಖಾ ಮುಖ್ಯಸ್ಥರು ಮತ್ತು ಸಿಬ್ಬಂದಿಗಳುಹಾಗೂ ನೈಋತ್ಯ ರೈಲ್ವೆಯಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಅನೀಶ ಹೆಗಡೆ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈಋತ್ಯ ರೈಲ್ವೆ, ಹುಬ್ಬಳ್ಳಿ.